ಬೈಂದೂರು: ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಬೈಂದೂರು -ಶಿರೂರು ಘಟಕ,ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ಮಾರುತಿ ಜನ ಸೇವಾ ಸಂಘ,ಮಾರುತಿ ಯುವಕ ಸಂಘ ಉಳ್ಳಾಲ ಹಾಗೂ ಸ.ಪ.ಪೂ ಕಾಲೇಜು ಬೈಂದೂರು ಇವರ ಸಹಯೋಗದಲ್ಲಿ ರಸ್ತೆ ಸುರಕ್ಷಾ ಜಾಗೃತಿ ಅಭಿಯಾನ ಕಾರ್ಯಕ್ರಮ ಸ.ಪ.ಪೂ ಕಾಲೇಜು ಬೈಂದೂರಿನಲ್ಲಿ ನಡೆಯಿತು.

ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ಜಯಂತ ಅಮೀನ್ ಕೋಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ನಿರ್ಲಕ್ಷತೆ ಅಜಾರೂಕತೆಗಳೆ ಹೆಚ್ಚಿನ ಅಪಘಾತಗಳಿಗೆ ಕಾರಣವಾಗಿದ್ದು ರಸ್ತೆ ನಿಯಮಗಳನ್ನು ಪಾಲಿಸದೆ ಮೋಜು ಮಸ್ತಿಗಾಗಿ ವಾಹನಗಳನ್ನು ಚಲಾಯಿಸುವುದರಿಂದ ರಸ್ತೆ ಅಪಘಾತಗಳಲ್ಲಿ ಮರಣ ಹೊಂದುವವರಲ್ಲಿ ಯುವಕರ ಸಂಖ್ಯೆಯೇ ಹೆಚ್ಚು ಪ್ರತಿ ವರ್ಷ ವಾಹನ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ರಸ್ತೆ ನಿಯಮ ಪಾಲಿಸಿದಾಗ ಅಪಘಾತಗಳು ಕಡಿಮೆಯಾಗುತ್ತವೆ.ನಮ್ಮ ಜೀವಕ್ಕೆ ನಾವೇ ರಕ್ಷಕರಾಗಿ ರಸ್ತೆಯಲ್ಲಿ ನಿಯಮಗಳನ್ನು ಪಾಲಿಸಬೇಕು ಎಂದರು.

ಮೊಗವೀರ ಯುವ ಸಂಘಟನೆ ಬೈಂದೂರು -ಶಿರೂರು ಘಟಕದ ಅಧ್ಯಕ್ಷ ಸೋಮಶೇಖರ ಜಿ.ಕಸ್ಟಮ್ ಅಧ್ಯಕ್ಷತೆ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಮೋಟಾರು ವಾಹನ ನಿರೀಕ್ಷಕ ಸಂತೋಷ ಶೆಟ್ಟಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಕುರಿತು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಬಗ್ವಾಡಿ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ,ಮಾರುತಿ ಜನಸೇವಾ ಸಂಘದ ಅಧ್ಯಕ್ಷ ಸಂದೀಪ್ ಪುತ್ರನ್, ಸ.ಪ.ಪೂ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ನಾಯಕ್,ಉಪಪಪ್ರಾಂಶುಪಾಲೆ ಸಂದ್ಯಾ ಭಟ್,ನಿಕಟಪೂರ್ವಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡ್ಕ ,ಉಪಾಧ್ಯಕ್ಷ ರವೀಶ್ ಕೊರವಡಿ ಉಪಸ್ಥಿತರಿದ್ದರು.

ಮೊಗವೀರ ಯುವ ಸಂಘಟನೆ ಕಾರ್ಯದರ್ಶಿ ಚಂದ್ರಶೇಖರ ಮೊಗವೀರ ಸ್ವಾಗತಿಸಿದರು.ನಟರಾಜ್ ಬೈಂದೂರು ಕಾರ್ಯಕ್ರಮ ನಿರ್ವಹಿಸಿದರು.

 

Leave a Reply

Your email address will not be published. Required fields are marked *

nineteen + fourteen =