ಬೈಂದೂರು: ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ವಾಹನವನ್ನು ಬೈಂದೂರು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.ಇಲ್ಲಿನ ಒತ್ತಿನೆಣೆ ಬಳಿ ಮುಂಜಾನೆ ವಾಹನ ತಪಾಸಣೆ ಮಾಡುವ ವೇಳೆ ಬ್ರಿಜಾ ಕಾರಿನ ಡಿಕ್ಕಿಯಲ್ಲಿ ನಾಲ್ಕು ದನಗಳನ್ನು ಸಾಗಿಸುತ್ತಿದ್ದು ಪೊಲೀಸರನ್ನು ನೋಡುತ್ತಿದ್ದಂತೆ ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ.ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.