ಬೈಂದೂರು: ರೋಟರಿ ಕ್ಲಬ್ ಬೈಂದೂರು 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಬೈಂದೂರು ರೋಟರಿ ಭವನದಲ್ಲಿ ನಡೆಯಿತು.

ರೋಟರಿ ಜಿಲ್ಲಾ ಮಾಜಿ ಗವರ್ನರ್ ಸದಾನಂದ ಚಾತ್ರ ಬೈಂದೂರು ರೋಟರಿ ಕ್ಲಬ್ ನ ನೂತನ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಉಪ್ಪುಂದ ಹಾಗೂ ಕಾರ್ಯದರ್ಶಿ ಮತ್ತು ಪದಾಧಿಕಾರಿಗಳಿಗೆ ಪದಪ್ರದಾನಿಸಿ ಮಾತನಾಡಿ ರೋಟರಿ ಸಂಸ್ಥೆ ಬಹುದೊಡ್ಡ ಸೇವಾ ಸಂಸ್ಥೆಯಾಗಿದ್ದು ವಿಶ್ವದಾದ್ಯಂತ ನೂರಾರು ಕೊಡುಗೆಗಳನ್ನು ಜನರಿಗೆ ಒದಗಿಸುತ್ತಿದೆ. ವಿವಿಧ ಕ್ಷೇತ್ರದ ಪರಿಣತರನ್ನು ರೋಟರಿ ಸೇವೆಗೆ ಸೇರಿಸಿಕೊಳ್ಳುವ ಮೂಲಕ ಅವರ ಜ್ಞಾನವೂ ಅಗತ್ಯವುಳ್ಳವರಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ರೋಟರಿ ವಲಯ-1ರ ಸಹಾಯಕ ಗವರ್ನರ್ ಐ. ನಾರಾಯಣ್ ಉಪಸ್ಥಿತರಿದ್ದರು.

ನೂತನ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಉಪ್ಪುಂದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಝೋನ್ 1ರ ವಲಯ ಸೇನಾನಿ ಪ್ರಸಾದ್ ಪ್ರಭು ರೋಟರಿ ಬುಲೆಟಿನ್ ಬಿಂದುವಾಣಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮೂವರು ನೂತನ ಸದಸ್ಯರು ರೋಟರಿ ಸಂಸ್ಥೆಗೆ ಸೇರ್ಪಡೆಗೊಂಡರು.ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಳಿಗೆ ಪ್ರತಿಭಾ ಪುರಸ್ಕಾರ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಲಿಕಾ ಸಹಾಯಧನ ಹಾಗೂ ಆರೋಗ್ಯ ಸಮಸ್ಯೆ ಉಳ್ಳವರಿಗೆ ವೈದ್ಯಕೀಯ ನೆರವು ನೀಡಲಾಯಿತು.ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ರೋಟರಿ ಕುಟುಂಬಿಕರನ್ನು ಗೌರವಿಸಲಾಯಿತು.

ನಿರ್ಗಮಿತ ಅಧ್ಯಕ್ಷ ಶಿರೂರು ಮೋಹನ್ ರೇವಣ್ಕರ್ ಸ್ವಾಗತಿಸಿದರು.ನಿರ್ಗಮಿತ ಕಾರ್ಯದರ್ಶಿ ಸುನಿಲ್ ಹೆಚ್. ಜಿ. ಬೈಂದೂರು ಹಿಂದಿನ ಸಾಲಿನ ಕಾರ್ಯಚಟುವಟಿಕೆಗಳ ವರದಿ ವಾಚಿಸಿದರು.ಆನಂದ ಮದ್ದೋಡಿ ಕಾರ್ಯಕ್ರಮ ನಿರೂಪಿಸಿದರು.ನೂತನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ವಂದಿಸಿದರು.

 

Leave a Reply

Your email address will not be published. Required fields are marked *

twelve − 10 =