ಭಟ್ಕಳ: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ವತಿಯಿಂದ ಹೊನ್ನಾವರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾನಕ್ಕಿ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸ್ಮಾರ್ಟ್ ಕ್ಲಾಸ್ ಕೊಠಡಿಯನ್ನು ಕೊಡುಗೆಯಾಗಿ ನೀಡಲಾಯಿತು.
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇದರ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಸ್ಮಾರ್ಟ್ ಕ್ಲಾಸ್ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿ ಸರಕಾರಿ ಶಾಲಾ ಮಕ್ಕಳು ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಅನ್ನುವ ಉದ್ದೇಶದಿಂದ ಸಾಕಷ್ಟು ಸರ್ಕಾರಿ ಶಾಲೆಗಳಿಗೆ ಸಾಲು ಸಾಲಾಗಿ ಸ್ಮಾರ್ಟ್ ಕ್ಲಾಸ್ ಮತ್ತು ಇತರೆ ಕೊಡುಗೆ ನೀಡುತ್ತಾ ಬರುತ್ತಿದ್ದೇವೆ.ಸ್ಮಾರ್ಟ್ ಕ್ಲಾಸ್ ಸದುಪಯೋಗಪಡಿಸಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶದ ಹೆಮ್ಮೆಯ ಪ್ರಜೆಗಳಾಗಿ ಹೊರಬರಲಿ. ಇಲ್ಲಿನ ಶಿಕ್ಷಕ ವೃಂದ,ಶಾಲಾ ಎಸ್.ಡಿ.ಎಮ್.ಸಿ ಹಾಗೂ ಹಳೆ ವಿದ್ಯಾರ್ಥಿಗಳು ಕಾರ್ಯ ನಿರ್ವಹಿಸಿದರೆ ಶಾಲಾ ಅಭಿವೃದ್ಧಿ ಕಾರ್ಯ ನೆರವೇರಿಸಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ.ಗೋವಿಂದ ಬಾಬು ಪೂಜಾರಿ ಹಾಗೂ ಮಾಲತಿ ದಂಪತಿಗಳನ್ನು ಶಾಲೆಯ ವತಿಯಿಂದ ಸಮ್ಮಾನಿಸಲಾಯಿತು.
ವೇದಿಕೆಯಲ್ಲಿ ಶಾಲಾ ಮುಖ್ಯೋಪದ್ಯಾಯರು,ಎಸ್.ಡಿ.ಎಮ್.ಸಿ ಸದಸ್ಯರು,ಹಳೆ ವಿದ್ಯಾರ್ಥಿಗಳು ಹಾಗೂ ಪಾಲಕರು ಹಾಜರಿದ್ದರು.