ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಬೈಂದೂರು ಕಳೆದ ಸಾಲಿನಲ್ಲಿ ಸುಮಾರು 225 ಕೋಟಿ ರೂ. ಅಧಿಕ ವ್ಯವಹಾರ ನಡೆಸಿ, 79,17,693.40 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು ಅವರು ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ನಡೆದ 2024-25ನೇ ಸಾಲಿನ ಸಂಘದ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಮಾನ ಮನಸ್ಕರು ಸೇರಿ ಸ್ಥಾಪಿಸಿದ ಈ ಸಂಸ್ಥೆ ಜಿಲ್ಲೆಯಲ್ಲಿ ಜನಸಾಮಾನ್ಯರ ಸಂಸ್ಥೆಯಾಗಿ ಹೆಸರು ಗಳಿಸಿದೆ.ಸಮಾಜದ ಆರ್ಥಿಕ,ಸಾಮಾಜಿಕ,ಶೈಕ್ಷಣಿಕ ಅಭಿವೃದ್ದಿ ,ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದೆ.ಬೈಂದೂರಿನಲ್ಲಿರುವ ಕಳೆದ 16 ವರ್ಷದ ಹಿಂದೆ ಹುಟ್ಟಿಕೊಂಡ ನಮ್ಮ ಸಂಘವು ಬೈಂದೂರಿನ ಕೇಂದ್ರ ಸ್ಥಾನದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು,ನಾಗೂರು, ಗೋಳಿಹೊಳೆ, ನಾವುಂದ, ಕಂಬದಕೋಣೆಗಳಲ್ಲಿ ಶಾಖೆಯನ್ನು ತೆರೆಯಲಾಗಿದೆ.ವರ್ಷಾಂತ್ಯಕ್ಕೆ ಸುಮಾರು 43 ಕೋಟಿ ರೂಪಾಯಿ ಠೇವಣೆ ಹೊಂದಿದ್ದು ಒಟ್ಟು 225 ಕೋಟಿಗೂ ಅಧಿಕ ವಾರ್ಷಿಕ ವ್ಯವಹಾರ ಹೊಂದಿದ್ದು ಸಂಘದ ಸದಸ್ಯರಿಗೆ ಶೇ.13% ಡಿವಿಡೆಂಟ್ ಘೋಷಿಸಲಾಗಿದೆ.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಮ್.ವಿನಾಯಕ ರಾವ್,ನಿರ್ದೇಶಕರಾದ ಸೀತಾರಾಮ ಮಡಿವಾಳ, ಅಣ್ಣಪ್ಪ ಪೂಜಾರಿ,ರಾಮಕೃಷ್ಣ ಖಾರ್ವಿ, ಮಂಜು ಪೂಜಾರಿ, ಮಂಜುನಾಥ ಪೂಜಾರಿ,ಪ್ರಶಾಂತ, ,ಧ.ಮ.ಆರ್ಯುವೇದ ಕಾಲೇಜಿನ ಅಧೀಕ್ಷಕ ಡಾ. ನಾಗರಾಜ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ನಾವುಂದ ಶಾಖಾ ಪ್ರಬಂಧಕ ಶ್ರೀನಿವಾಸ ಸ್ವಾಗತಿಸಿದರು.ಸಂಘದ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ವಾರ್ಷಿಕ ವರದಿ ಮಂಡಿಸಿ ಕಾರ್ಯಕ್ರಮ ನಿರೂಪಿಸಿದರು.ಕಂಬದಕೋಣೆ ಶಾಖಾ ವ್ಯವಸ್ಥಾಪಕ ರಾಜೇಂದ್ರ ವಂದಿಸಿದರು.ಸಿಬ್ಬಂದಿ ಸಂತೋಷ ಸಹಕರಿಸಿದರು.