ಬೈಂದೂರು; ಸಾಧನೆ ಸುಲಭದ ಮಾತಲ್ಲ.ಕೇವಲ ಪ್ರತಿಭೆಯಿಂದ ಮಾತ್ರ ಯಶಸ್ಸು ಕಾಣಲಾಗದು.ಕಠಿಣ ಪ್ರಯತ್ನದಿಂದ ಮಾತ್ರ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯ.ಜಗತ್ತಿನಲ್ಲಿ ಯಾವುದು ಕೂಡ ಸುಲಭವಾಗಿ ದಕ್ಕುವುದಿಲ್ಲ.ನಾವು ಸ್ವೀಕರಿಸುವ ರೀತಿ ಮತ್ತು ಸಾಧಿಸುವ ಪ್ರಯತ್ನ ಬದುಕಿಗೆ ಸಾರ್ಥಕತೆಯನ್ನು ನೀಡುತ್ತದೆ.ಹೀಗಾಗಿ ವಿದ್ಯಾರ್ಥಿ ದೆಸೆಯಲ್ಲಿ ಕಠಿಣ ಪ್ರಯತ್ನದ ಮೂಲಕ ಬೆಳೆಯಬೇಕು.ಸಾರ್ಥಕತೆಯ ಸಂತ್ರಪ್ತಿ ದೊರೆಯಬೇಕಾದರೆ ಸಾಧನೆಯ ಬದುಕು ನಮ್ಮದಾಗಬೇಕು ಎಂದು ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನಾಗರಾಜ ಶೆಟ್ಟಿ ಹೇಳಿದರು ಅವರು ಬೈಂದೂರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ ಸಂಘದ ಪ್ರಧಾನ ಕಛೇರಿಯಲ್ಲಿ ನಡೆದ ವಿದ್ಯಾರ್ಥಿ ವೇತನ ವಿತರಣೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭ ಪುರಸ್ಕಾರ ವಿತರಿಸಿ ಈ ಮಾತುಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ವತ್ತಿನೆಣೆ ಶ್ರೀ ರಾಘವೇಂದ್ರ ಸ್ವಾಮಿ ಮಠದ ಅಧ್ಯಕ್ಷ ಸೂಲ್ಯಯಣ್ಣ ಶೆಟ್ಟಿ,ಧರ್ಮಸ್ಥಳ ಮಂಜುನಾಥೇಶ್ವರ ಆರ್ಯುವೇದ ಕಾಲೇಜಿನ ಅಧೀಕ್ಷಕ ಡಾ. ನಾಗರಾಜ ಪೂಜಾರಿ,ಉಪಾಧ್ಯಕ್ಷ ವಿನಾಯಕ ರಾವ್ ಮರವಂತೆ, ನಿರ್ದೇಶಕರಾದ ಸೀತಾರಾಮ ಮಡಿವಾಳ, ರಾಮಕೃಷ್ಣ ಖಾರ್ವಿ, ಮಂಜು ಪೂಜಾರಿ, ಮಂಜುನಾಥ ಪೂಜಾರಿ,ಪ್ರಶಾಂತ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದ ನಿಧಿಶ್ರೀ ಬಿಜೂರು ಇವರನ್ನು ಸಮ್ಮಾನಿಸಲಾಯಿತು ಹಾಗೂ ಸಂಘದ ಅರ್ಹ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಸಂಘದ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ವಂದಿಸಿದರು.ಸಿಬ್ಬಂದಿ ಸಂತೋಷ ಸಮ್ಮಾನ ಪತ್ರ ವಾಚಿಸಿದರು.
ವರದಿ/ಗಿರಿ ಶಿರೂರು
ಚಿತ್ರ: ಶಶಾಂಕ್ ಬ್ಯೆಂದೂರು