ಬೈಂದೂರು; ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ.ರಾಘವೇಂದ್ರ ಅವರು ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ ಅವರನ್ನು ಭೇಟಿಯಾಗಿ ವಾರಕ್ಕೊಮ್ಮೆ ಇರುವ ರೈಲು ಸಂಖ್ಯೆ 10215/10216 ರೈಲನ್ನು ಮೂಕಾಂಬಿಕಾ ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಿ ದಿನಂಪ್ರತಿ ಸೇವೆ ನೀಡುವಂತೆ ಮನವಿ ಮಾಡಿದರು.
ಇದರೊಂದಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಮೂಲಸೌಲಭ್ಯ ಅಭಿವೃದ್ಧಿ, ಬಿಜೂರು ರೈಲು ನಿಲ್ದಾಣ ಹಾಗೂ ಸೇನಾಪುರ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕ ಮೆಮು, ಮತ್ಸ್ಯಗಂಧ ಹಾಗೂ ಪಂಚಗಂಗಾ ಎಕ್ಸ್ಪ್ರೆಸ್ ರೈಲು ನಿಲುಗಡೆಗೆ ಮನವಿ ಮಾಡಿದರು. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಸಂಧರ್ಭದಲ್ಲಿ ರೈಲ್ವೆ ಸಲಹಾ ಮಂಡಳಿಯ ಮಾಜಿ ಸದಸ್ಯರಾದ ಬೈಂದೂರಿನ ವೆಂಕಟೇಶ್ ಕಿಣಿ ಅವರು ಉಪಸ್ಥಿತರಿದ್ದರು.
