ಬೈಂದೂರು: ತಾಲೂಕು ಕಂಬಳ ಸಮಿತಿಯ ಅಧ್ಯಕ್ಷ ದಿ. ವೆಂಕಟ ಪೂಜಾರಿ ಅತ್ಯುತ್ತಮ ಸಾಮಾಜಿಕ ಸಂಘಟಕರಾಗಿ ಗುರುತಿಸಿಕೊಂಡವರು.ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಶ್ರಮಿಸುತ್ತಿದ್ದರು. ಬೈಂದೂರು ಭಾಗದ ಯುವಕರಿಗೆ ಕಂಬಳದ ಆಸಕ್ತಿ ಬೆಳೆಸಿದ ಮೊದಲ ವ್ಯಕ್ತಿಯಾಗಿದ್ದರು ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು ಅವರು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆದ ಇತ್ತೀಚಿಗೆ ನಿಧನರಾದ ದಿ. ವೆಂಕಟ ಪೂಜಾರಿ ಸಸಿಹಿತ್ಲು ಶೃದ್ಧಾಂಜಲಿ ಸಭೆಯಲ್ಲಿ ನುಡಿನಮನ ಸಲ್ಲಿಸಿದರು.
ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ, ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ಕ್ಷೇತ್ರ ಬಿಜೆಪಿಯ ಮಾಜಿ ಅಧ್ಯಕ್ಷ ದೀಪಕ್ ಕುಮಾರ ಶೆಟ್ಟಿ, ಬೈಂದೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ ಎಲ್. ಪೂಜಾರಿ, ಕಂಬಳ ಪೋಷಕ ಶಾಂತಾರಾಮ ಶೆಟ್ಟಿ, ಸೋಮಶೇಖರ ಶೆಟ್ಟಿ ಧರ್ಮಸ್ಥಳ, ಉಡುಪಿ ಜಿಲ್ಲಾ ಕಂಬಳ ಸಮಿತಿಯ ಕಾರ್ಯದರ್ಶಿ ಲೋಕೇಶ್ ಶೆಟ್ಟಿ, ಗೋಪಾಲ ಶೆಟ್ಟಿ ಮತ್ತಿತರರು ನುಡಿನಮನ ಸಲ್ಲಿಸಿದರು. ಬಳಿಕ ಅವರ ಕುಟುಂಬಿಕರು, ಹಿತೈಶಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.