ಬೈಂದೂರು: ರಕ್ತದಾನದಿಂದ ಇನ್ನೋರ್ವರ ಜೀವ ಉಳಿಸುವುದು ಮಾತ್ರವಲ್ಲದೆ ರಕ್ತದಾನಿಗಳಿಗೂ ಸಹ ಹೃದಯ ಸಂಬಂಧಿ ಕಾಯಿಲೆಗಳ ನಿವಾರಣೆ,ಮಾನಸಿಕವಾಗಿ ಮತ್ತು ಕ್ರಿಯಾತ್ಮಕವಾಗಿ ಬದುಕುವ ಮನೋಭಾವ, ಉತ್ಸುಕತೆಯನ್ನು ಮತ್ತು  ಸಾಮಾಜಿಕ ಸೇವೆಯನ್ನು ಮಾಡಿದ ಸಂತೃಪ್ತಿ ಮತ್ತು ಜೀವನ ಸಾರ್ಥಕತೆಯ ಸಾರವನ್ನು ರಕ್ತದಾನ ನೀಡುತ್ತದೆ ಎಂದು ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ ರಘು ನಾಯ್ಕ ಹೇಳಿದರು ಅವರು ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕದ ಸಹಯೋಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ, ರಕ್ತನಿಧಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಹಾಗೂ ಬೈಂದೂರು, ರಕ್ತನಿಧಿ ಕೇಂದ್ರ ಇವರ ಸಹಯೋಗದಲ್ಲಿ ನಡೆದ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಮತ್ತು ಯುವ ರೆಡ್ ಕ್ರಾಸ್ ಘಟಕ ಉದ್ಘಾಟಿಸಿ ಮಾತನಾಡಿದರು

ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕದ ಅಧ್ಯಕ್ಷ ರವಿರಾಜ್ ಚಂದನ್ ಕಳವಾಡಿ ಅಧ್ಯಕ್ಷತೆ ವಹಿಸಿದ್ದರು.ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಬೈಂದೂರು ಘಟಕದ ಸಭಾಪತಿ ನಿತಿನ್ ಬಿ.  ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು

ಮುಖ್ಯ ಅತಿಥಿಗಳಾಗಿ  ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆಯ ನಿಕಟಪೂರ್ವ ಅಧ್ಯಕ್ಷ ಶಿವರಾಮ್ ಕೆ. ಎಮ್., ಭಾರತೀಯ ರೆಡ್‌ಕ್ರಾಸ್ ಬೈಂದೂರು ಘಟಕದ ಖಜಾಂಚಿ ಸಂತೋಷ್‌ ಕುಮಾರ್ ಶೆಟ್ಟಿ, ಕುಂದಾಪುರ ಘಟಕದ ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯ ಗಣೇಶ್ ಆಚಾರ್ಯ, ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕದ ಗೌರವ ಸಲಹೆಗಾರ ಸಂಜೀವ ಮೊಗವೀರ ದೊಂಬೆ, ದಿನೇಶ್ ಎಂ. ಕುಂದರ್,ಸತೀಶ ಶೆಟ್ಟಿ ಉಪಸ್ಥಿತರಿದ್ದರು.

ಮೊಗವೀರ ಯುವ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಕೃಷ್ಣ ಬೈಂದೂರು ಸ್ವಾಗತಿಸಿದರು.ಮೊಗವೀರ ಯುವ ಸಂಘಟನೆಯ ಬೈಂದೂರು ಘಟಕದ ಕಾರ್ಯದರ್ಶಿ ಗೌತಮ್ ತಗ್ಗರ್ಸೆ ಕಾರ್ಯಕ್ರಮ ನಿರ್ವಹಿಸಿದರು.ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕ ಡಾ. ಶಿವಕುಮಾರ್ ಪಿ. ವಿ. ವಂದಿಸಿದರು.

 

Leave a Reply

Your email address will not be published.

2 × 4 =