ಬೈಂದೂರು; ಧರ್ಮಸ್ಥಳ ಕ್ಷೇತ್ರದ ಕುರಿತು ಹಾಗೂ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಕುರಿತು ನಡೆಯುತ್ತಿರುವ ಅವಹೇಳನಕಾರಿ ಚಟುವಟಿಕೆಗಳನ್ನು ಖಂಡಿಸಿ.ತಪ್ಪಿತಸ್ಥರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೈಂದೂರು ತಾಲೂಕು ಧರ್ಮಸ್ಥಳ ಅಭಿಮಾನಿಗಳ ವೇದಿಕೆ ವತಿಯಿಂದ ಜನಾಗ್ರಹ ಸಭೆ ಹಾಗೂ ಜಾಥಾ ಕಾರ್ಯಕ್ರಮ ಸೆ.02 ರಂದು ಪೂರ್ವಾಹ್ನ 10 ಗಂಟೆಗೆ ಬೈಂದೂರು ರೋಟರಿ ಕ್ಲಬ್ ಬೈಂದೂರಿನಲ್ಲಿ ನಡೆಯಲಿದೆ.ಬಳಿಕ ಜಾಥಾ ನಡೆಸಿ ತಾಲೂಕು ದಂಡಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಲಿದ್ದೇವೆ ಎಂದು ವೇದಿಕೆಯ ಮುಖ್ಯಸ್ಥ ಸುಧಾಕರ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.