ಬೈಂದೂರು; ದೈವಜ್ಞ ಕ್ರೆಡಿಟ್ ಸೌಹಾರ್ಧ ಸಹಕಾರಿ ಸಂಘ ಬೈಂದೂರು ಇದರ ವಾರ್ಷಿಕ ಮಹಾ ಸಭೆ ಬೈಂದೂರು ರೋಟರಿ ಭವನ ದಲ್ಲಿ ನೆಡೆಯಿತು.ಸಂಸ್ಥೆಯ ಅಧ್ಯಕ್ಷ ರವೀಂದ್ರ ಶೇಟ್ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಸ್ಥೆಯ ಈ ಸಾಲಿನ ಲಾಭಾಂಶ ದಲ್ಲಿ ಷೇರು ಬಂಡವಾಳದರರಿಗೆ 8% ಡಿವಿಡೆಂಡ್ ಘೋಷಣೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಸುರೇಶ ಶೇಟ್ ಅಂಪಾರ್,ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟದ ಅಭಿವೃದ್ಧಿ ಅಧಿಕಾರಿ ವಿಜಯ್ ಬಿ.ಎಸ್, ಬೈಂದೂರು ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷ ಸತೀಶ್ ಶೇಟ್ ಉಪ್ಪುಂದ,ಕುಂದಾಪುರ ಜ್ಯುವೆಲರ್‍ಸ್ ಅಸೋಸಿಯೇಷನ್ ಸಂಘದ ಅಧ್ಯಕ್ಷ ಗಣೇಶ್ ಶೇಟ್ ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷ ಹರೀಶ್ ಶೇಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತಿಮಾ ಶೆಣೈ ವಾರ್ಷಿಕ ಲೆಕ್ಕ ಪರಿಶೋಧನೆಯ ವರದಿ ಮಂಡಿಸಿದರು. ಮೋಹನ್ ರೇವಣಕರ್ ಕಾರ್ಯಕ್ರಮ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಂಘದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು ಹಾಗೂ ಆರ್ಥಿಕ ಧನ ಸಹಾಯ ನೀಡಲಾಯಿತು.