ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೈಂದೂರು ಇದರ ಸಮಾರೋಪ ಸಮಾರಂಭದ ಧಾರ್ಮಿಕ ಸಭಾ ಕಾರ್ಯಕ್ರಮ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಿತು.
ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಧಾಕರ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.
ಬೈಂದೂರು ಶ್ರೀ ಸೇನೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರೀಶ್ ಬೈಂದೂರು ಮಾತನಾಡಿ ಗಣೇಶೋತ್ಸವ ಒಂದು ದೊಡ್ಡ ಮಟ್ಟದ ಧಾರ್ಮಿಕ ಕಾರ್ಯಕ್ರಮವಾಗಿದ್ದು ಇಂತಹ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಧಾರ್ಮಿಕ ಮನೋಭಾವದಿಂದ ಭಾಗವಹಿಸಿದಾಗ ಮನಸ್ಸಿಗೆ ನೆಮ್ಮದಿ, ಕಷ್ಟಗಳಿಗೆ ಪರಿಹಾರ ದೊರಕುತ್ತದೆ. ಬೈಂದೂರಿನ ಸೇನೇಶ್ವರ ದೇವಸ್ಥಾನ ಬಹಳ ಪುರಾತನ ದೇವಸ್ಥಾನವಾಗಿದ್ದು ಇಂತಹ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಹೆಚ್ಚು ಹೆಚ್ಚು ಸೇರುವಂತಾಗಬೇಕು ಎಂದರು.
ಸಭೆಯಲ್ಲಿ ಮಾಜಿ ಸೈನಿಕ ಬೈಂದೂರು ಚಂದ್ರಶೇಖರ ನಾವಡ, ಲಾವಣ್ಯ ರಂಗ ಸಂಸ್ಥೆಯ ಗಣೇಶ ಕಾರಂತ್, ಗಣೇಶೋತ್ಸವ ಸಮಿತಿ ಉಪಾಧ್ಯಕ್ಷ ಹೆರಿಯ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ದಯಾನಂದ. ಪಿ.ಬೈಂದೂರು ಇವರನ್ನು ಗಣೇಶೋತ್ಸವ ಸಮಿತಿ ವತಿಯಿಂದ ಸಮ್ಮಾನಿಸಲಾಯಿತು. ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂದ್ರ ಪೂಜಾರಿ ಸ್ವಾಗತಿಸಿದರು.ನಾಗರಾಜ್ ಪಿ. ಯಡ್ತರೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.