ಶಿರೂರು: ಇತ್ತೀಚೆಗೆ ವಿದ್ಯುತ್ ಅವಘಡದಿಂದ ನಿಧನರಾದ ಶಿರೂರಿನ ಬಿಜೆಪಿ ಮುಖಂಡ ಹಾಗೂ ಉದ್ಯಮಿ ಸತೀಶ ಪ್ರಭುರವರ ಮನೆಗೆ ರವಿವಾರ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ ರಾಘವೇಂದ್ರ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಲಾಖೆ ಹಾಗೂ ಸರಕಾರದಿಂದ ದೊರೆಯುವ ಪರಿಹಾರವನ್ನು ದೊರಕಿರಿಸುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ.ಅವರ ಆಗಲುವಿಕೆ ಆಘಾದ ನಷ್ಟ ತಂದಿದೆ ಎಂದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ,ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಜಿ.ಪಂ ಮಾಜಿ ಸದಸ್ಯ ಸುರೇಶ್ ಬಟ್ವಾಡಿ,ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ,ಗ್ರಾ.ಪಂ ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ,ರವೀಂದ್ರ ಶೆಟ್ಟಿ ಆರ್‍ಮಕ್ಕಿ,ಸುರೇಂದ್ರ ದೇವಾಡಿಗ,ದಿ.ಭಟ್ಕಳ ಅರ್ಬನ್ ಕೋ-ಅಪರೇಟಿವ್ ನಿರ್ದೇಶಕ ತುಳಸಿದಾಸ್ ಮೊಗೇರ್,ಆಕ್ರಮ -ಸಕ್ರಮ ಸಮಿತಿ ಸದಸ್ಯ ದಿನೇಶ್ ಕುಮಾರ್ ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

 

 

 

 

 

 

Leave a Reply

Your email address will not be published.

12 − 6 =