ಬೈಂದೂರು: ಬೈಂದೂರು ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯು ಕಳೆದ ಸಾಲಿನಲ್ಲಿ ರೂಪಾಯಿ 379.10 ಕೋಟಿ ವ್ಯವಹಾರ ನಡೆಸಿ ರೂಪಾಯಿ 61.67 ಲಕ್ಷ ನಿವ್ಹಳ ಲಾಭ ಗಳಿಸಿದೆ ಹಾಗೂ ಸಂಘದ ಸದಸ್ಯರಿಗೆ ಶೇ.13% ಡಿವಿಡೆಂಡ್ ಘೋಷಿಸಲಾಗಿದೆ ಎಂದು ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು ಅವರು ಬೈಂದೂರು ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಪ್ರದಾನ ಕಛೇರಿಯಲ್ಲಿ ನಡೆದ 23ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ  ಸಂಘವು ಎಂಟು ಶಾಖೆಗಳನ್ನು ಹೊಂದಿದ್ದು.ಬೈಂದೂರಿನ ಪ್ರಧಾನ ಕಛೇರಿ ಕಟ್ಟಡ ನಿರ್ಮಾಣಕ್ಕೆ ನಿವೇಶನ ಖರೀದಿಸಲಾಗಿದ್ದು ಸಂಸ್ಥೆ ಬೆಳ್ಳಿ ಹಬ್ಬ ಆಚರಿಸುವ ವೇಳೆಗೆ ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಸ್ವಂತ ಕಟ್ಟಡದಲ್ಲಿ ಪ್ರಧಾನ ಕಛೇರಿ ಉದ್ಘಾಟನೆಗೊಳ್ಳಲಿದೆ.ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬಂಧಿಗಳ ಸಹಕಾರದಿಂದ ಸೊಸೈಟಿ ಇನ್ನಷ್ಟು ಪ್ರಗತಿ ಸಾಧಿಸಿದೆ ಎಂದರು.

ನಿರ್ದೇಶಕರಾದ ಎಸ್.ರಾಜು ಪೂಜಾರಿ,ಕೆ.ಶಂಕರ ಪೂಜಾರಿ,ಚಿಕ್ಕು ಪೂಜಾರಿ, ಕಲ್ಪನಾ ಭಾಸ್ಕರ್,ಯು.ಕೇಶವ ಪೂಜಾರಿ,ಕೆ.ಶ್ರೀನಿವಾಸ ಪೂಜಾರಿ,ಜಯಸೂರ್ಯ ಪೂಜಾರಿ,ಶೇಖರ ಪೂಜಾರಿ ನಾಗೂರು,ಉದಯ ಜಿ.ಪೂಜಾರಿ,ವೆಂಕಟೇಶ ಮಾಚ ಪೂಜಾರಿ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ  ಪಶು ವೈದ್ಯಾಧಿಕಾರಿ ಬಾಬಣ್ಣ ಪೂಜಾರಿ ಯವರನ್ನು ಸಮ್ಮಾನಿಸಲಾಯಿತು ಹಾಗೂ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ನಿರ್ದೇಶಕರಾದ ಎಸ್.ರಾಜು ಪೂಜಾರಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಗಣೇಶ ಬಿ.ಪೂಜಾರಿ ವಾರ್ಷಿಕ ಲೆಕ್ಕಪತ್ರ ಮಂಡಿಸಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.ಕುಂದಾಪುರ ಶಾಖಾ ವ್ಯವಸ್ಥಾಪಕ ದಿನೇಶ್ ಸಮ್ಮಾನ ಪತ್ರ ವಾಚಿಸಿದರು.

ವರದಿ/ಗಿರಿ ಶಿರೂರು

ಚಿತ್ರ: ದೊಟ್ಟಯ್ಯ ಪೂಜಾರಿ, ಶಬರಿ ಸ್ಟುಡಿಯೋ ಯಡ್ತರೆ

 

Leave a Reply

Your email address will not be published. Required fields are marked *

one × 2 =