ಶಿರೂರು : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ,ಉಡುಪಿ ಜಿಲ್ಲಾ ರೈತ ಮೋರ್ಚಾ ಇದರ ವತಿಯಿಂದ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಗೋಪೂಜೆ ಮತ್ತು ಗೋಗ್ರಾಸ ಕಾರ್ಯಕ್ರಮ ಅಮೃತಧಾರ ಗೋಶಾಲೆ ಗೋಳಿಗುಂಡಿ ಶಿರೂರಿನಲ್ಲಿ ನಡೆಯಿತು.
ಶಿರೂರು ಗ್ರಾಮ ಪುರೋಹಿತರಾದ ಸುರೇಶ ಅವಭೃತ ಗೋಶಾಲೆಯಲ್ಲಿ ಗೋಪೂಜೆ ನೆರವೇರಿಸಿದರು.

ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷೆ ಅನಿತಾ ಆರ್.ಕೆ,ಉಡುಪಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ,ಜಿ.ಪಂ ಮಾಜಿ ಸದಸ್ಯ ಸುರೇಶ ಬಟ್ವಾಡಿ,ರೈತ ಮೋರ್ಚಾ ಮಂಡಲದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ,ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಮೋಹನ್‌ಚಂದ್ರ ಉಪ್ಪುಂದ,ಪ್ರಧಾನ ಕಾರ್ಯದರ್ಶಿ ಗೋಪಾಲ ಪೂಜಾರಿ ವಸ್ರೆ,ಮಂಡಲ ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ,ಕರಿಯ ಕೊಠಾರಿ,ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಗಜೇಂದ್ರ ಬೇಲೆಮನೆ,ಹಿಂದುಳಿದ ಮೋರ್ಚಾದ ಅಧ್ಯಕ್ಷ ಶಿವರಾಜ್ ಪೂಜಾರಿ,ಶಿರೂರು ರೈತ ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ಹೊಸ್ಮನೆ,ಗ್ರಾ.ಪಂ ಸದಸ್ಯ ಬಾಬು ಮೊಗೇರ್,ಶಂಕರ ಡಿ.ಮೇಸ್ತ,ರಾಮಚಂದ್ರ ಶಿರೂರಕರ್,ದಿನೇಶ ಬಪ್ಪನಬೈಲು,ರಮೇಶ ಗೌಡ ಯಳಜಿತ್ ಹಾಜರಿದ್ದರು.