ಬೈಂದೂರು: ಬೈಂದೂರು ಪಟ್ಟಣ ಪಂಚಾಯತ್ ನಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡುವಂತೆ ಕಳೆದ ಹಲವು ದಿನಗಳಿಂದ ರೈತ ಸಂಘ ಬೈಂದೂರು ಹಾಗೂ ಗ್ರಾಮೀಣ ಭಾಗದ ರೈತರಿಂದ ಪ್ರತಿಭಟನೆ ನಡೆಯುತ್ತಿದ್ದು ಸೋಮವಾರದಿಂದ ಬೈಂದೂರಿನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಆರಂಭಗೊಂಡಿದೆ.
ಉದ್ಯಮಿ ನಿತಿನ್ ನಾರಾಯಣ ತಳಿರು ಕಟ್ಟುವ ಮೂಲಕ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಬೈಂದೂರಿನ ಹಳ್ಳಿಗಳ ಪಾಲಿಗೆ ಪಟ್ಟಣ ಪಂಚಾಯತ್ ನಿರ್ಧಾರ ಸಮಸ್ಯೆಯ ಸುಳಿಯಲ್ಲಿ ಸಿಲುಕಿಸಿದೆ.ಅರಣ್ಯ ಪ್ರದೇಶಗಳನ್ನು ಸೇರಿಸಿ ಅವೈಜ್ನಾನಿಕ ವಿಂಗಡನೆ ಮಾಡಿದ್ದು ಜನಪ್ರತಿನಿಧಿಗಳು ಸ್ವಲ್ಪ ಪ್ರಾಮಾಣಿಕವಾಗಿ ಗಮನಹರಿಸಿದರೆ ಪರಿಹಾರ ಸಾದ್ಯ ಎಂದರು ಮತ್ತು ಹೋರಾಟಕ್ಕೆ ಬೆಂಬಲ ಸೂಚಿಸಿದರು.
ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ ಶೆಟ್ಟಿಮಾತನಾಡಿ ಈಗಾಗಲೆ ಬೈಂದೂರು ಮತ್ತು ಉಡುಪಿಯಲ್ಲಿ ನಮ್ಮ ಆಗ್ರಹ ಈಡೇರಿಸುವಂತೆ ಬೇಡಿಕೆ ಇಟ್ಟು ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದು ಸರಕಾರದ ಮಟ್ಟದಲ್ಲಿ ಸಂಚಲನ ಮೂಡಿಸಿದೆ.ನ್ಯಾಯ ಸಿಗುವ ವರಗೆ ಹೋರಾಟ ಮುಂದುವರಿಯಲಿದ್ದು ಎಲ್ಲಾ ಭಾಗದ ರೈತ ಮುಖಂಡರು ನಾಯಕರು ಸಾರ್ವಜನಿಕರು ಬೆಂಬಲ ಸೂಚಿಸಿದ್ದು ಪ್ರತಿದಿನ ಒಂದೊಂದು. ಭಾಗದ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದರು.






ಹೊಸೂರು ಭಾಗದ ನೂರಾರು ಸಾರ್ವಜನಿಕರು ಸೋಮವಾರದ ಪ್ರತಿಭಟನೆಯಲ್ಲಿ ಭಾಗವಹಿಸಿದರು.ನಾಗಪ್ಪ ಮರಾಠಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವರದಿ/ಚಿತ್ರ: ಗಿರಿ ಶಿರೂರು