ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿಉತ್ಸವದ ಅಂಗವಾಗಿ ಸೋಮವಾರ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ದೇವಸ್ಥಾನದ ಆಡಳಿತ ಮಂಡಳಿ ಗೌರವಾಧ್ಯಕ್ಷ ಎಸ್.ರಾಜು ಪೂಜಾರಿ ನವರಾತ್ರಿ ಉತ್ಸವದ ಧಾರ್ಮಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಬಿ. ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು.
ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷರಾದ ಎನ್. ನಾಗರಾಜ ಶೆಟ್ಟಿ,ಕಾರ್ಯದರ್ಶಿ ಎಸ್. ಶಿವರಾಮ ಪೂಜಾರಿ, ಸದಸ್ಯರಾದ ಶಂಕರ ಮೊಗವೀರ, ನಾಗರಾಜ ಗಾಣಿಗ, ಮಂಜುನಾಥ ಆಚಾರ್ಯ,ಸತ್ಯಪ್ರಸನ್ನ, ಪಾತ್ರಿಗಳಾದ ಅಣ್ಣಪ್ಪ ಪೂಜಾರಿ,ರವೀಂದ್ರ ಶ್ಯಾನುಭಾಗ್ ಹಾಗೂ ಭಕ್ತಾಧಿಗಳು ಹಾಜರಿದ್ದರು.
