ಶಿರೂರು: ಇತ್ತೀಚೆಗೆ ವಿದ್ಯುತ್ ಅವಘಡದಿಂದ ನಿಧನರಾದ ಶಿರೂರಿನ ಬಿಜೆಪಿ ಮುಖಂಡ ಹಾಗೂ ಉದ್ಯಮಿ ಸತೀಶ ಪ್ರಭುರವರ ಮನೆಗೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಬಾಬು ಶೆಟ್ಟಿ,ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು,ತಾ.ಪಂ ಮಾಜಿ ಸದಸ್ಯ ಪುಷ್ಪರಾಜ್ ಶೆಟ್ಟಿ,ಸದಾಶಿವ ಡಿ.ಪಡುವರಿ,ಆಕ್ರಮ ಸಕ್ರಮ ಸಮಿತಿ ಸದಸ್ಯ ದಿನೇಶ್ ಕುಮಾರ್,ಮಂಜುನಾಥ  ಪೈ  ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

 

Leave a Reply

Your email address will not be published.

five + 2 =