ಶಿರೂರು; ಕೃಷಿ ,ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಶಿರೂರಿನ ರೈತ ಸಂಘದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಹೊಸ್ಮನೆ ಯವರಿಗೆ 2025 ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.ಇವರು ಮೇಲ್ಪಂಕ್ತಿ ಎರಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ,ವೆಂಕಟರಮಣ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಹಾಗೂ ದಾಸನಾಡಿ ಶಾರದೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿ ಹಾಗೂ ಹಲವು ಸಂಘ ಸಂಸ್ಥೆಗಳು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.ಕೃಷಿ ಮತ್ತು ಸಾಮಾಜಿಕ ಸೇವೆಗಾಗಿ ಇವರಿಗೆ 2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ ಹಾಗೂ ಬೈಂದೂರಿನ ಪ್ರತಿಷ್ಠಿತ ಸಂಸ್ಥೆಯಾದ ಸುರಭಿ (ರಿ.) ಬೈಂದೂರು ಕಲಾ ಸಂಸ್ಥೆಗೂ ಕೂಡ 2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ವರದಿ/ ಗಿರಿ ಶಿರೂರು