ಶಿರೂರು: ಯುವಶಕ್ತಿ ಕಲಾ ಮತ್ತು ಸಾಂಸ್ಕ್ರತಿಕ ಪ್ರತಿಷ್ಠಾನ ಕರಾವಳಿ ಶಿರೂರು ಇದರ ವತಿಯಿಂದ ಯಕ್ಷಗಾನ ಹಾಗೂ ಭರತನಾಟ್ಯ ತರಬೇತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನ.16 ರಂದು ಮದ್ಯಾಹ್ನ 3 ಗಂಟೆಗೆ ಯುವಶಕ್ತಿ ಸಭಾ ವೇದಿಕೆ ಕರಾವಳಿಯಲ್ಲಿ ನಡೆಯಲಿದೆ.
ನೂತನ ತರಬೇತಿ ಕೇಂದ್ರದ ಉದ್ಘಾಟನೆಯನ್ನು ಬೈಂದೂರಿನ ಜನಪ್ರಿಯ ಶಾಸಕರಾದ ಗುರುರಾಜ ಗಂಟಿಹೊಳೆ ಯವರ ಅಮೃತ ಹಸ್ತದಿಂದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಯುವಶಕ್ತಿ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಯಶವಂತ ಬಿಲ್ಲವ ಅಧ್ಯಕ್ಷತೆ ವಹಿಸಲಿದ್ದಾರೆ.ಉದ್ಯಮಿ ಹಾಗೂ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಡೈರಕ್ಟರ್ ಡಾ.ಗೋವಿಂದ ಬಾಬು ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಈ ತರಬೇತಿಯ ಸಂಪೂರ್ಣ ಸೌಲಭ್ಯವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಯುವಶಕ್ತಿ ಕಲಾ ಮತ್ತು ಸಾಂಸ್ಕ್ರತಿಕ ಪ್ರತಿಷ್ಠಾನ ಕರಾವಳಿ ಶಿರೂರು ಇದರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.