ರಿಪ್ಪನ್‌ಪೇಟೆ : ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉಪ್ಪುಂದ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ ಮಕ್ಕಳ ವಿದ್ಯಾರ್ಜನೆಗಾಗಿ ಸೋಮವಾರ ಮೂರು ಕಂಪ್ಯೂಟರ್, ಪ್ರೊಜೆಕ್ಟರ್, ಬ್ಯಾಟರಿ, ಲ್ಯಾಪ್‌ಟಾಪ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಸುಸಜ್ಜಿತ ಸ್ಮಾರ್ಟ್ ಕ್ಲಾಸ್ ಸುಮನ ಸಂಪದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಗೋವಿಂದ ಬಾಬು ಪೂಜಾರಿ ಅವರಂತಹ ಕೊಡುಗೈ ದಾನಿಗಳು ಗ್ರಾಮೀಣ ಭಾಗದಲ್ಲಿ ಇಂದಿಗೂ ಎಲೆಮರೆ ಕಾಯಿಯಂತೆ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ. ಇದರ ಸದುಪಯೋಗ ಪಡೆದುಕೊಂಡ ಮಕ್ಕಳು ಸಹ ಭವಿಷ್ಯದಲ್ಲಿ ಇಂತಹ ಸೇವಾ ಮನೋಭಾವ ಮೈಗೂಡಿಸಿಕೊಳ್ಳಲಿ ಎಂದು ಹೇಳಿ, ಶಿಕ್ಷಕರ ಕರ್ತವ್ಯನಿಷ್ಠೆ, ಸೇವಾ ಬದ್ಧತೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಈ  ಸಂದರ್ಭದಲ್ಲಿ ದಾನಿಗಳಾದ ಗೋವಿಂದ ಬಾಬು ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಮಂಗಲ ದೇವರಾಜ್, ಸದಸ್ಯರಾದ ಆಶಾ ಉದಯ್ ಕುಮಾರ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಮೋಹನ್ ಎಂ, ಹಿರಿಯರಾದ ಶ್ರೀಧರಮೂರ್ತಿ ಕೆ.ಎಸ್, ಅನಂತ ರಾವ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಈಶ್ವರಗೌಡ, ಮುಖ್ಯ ಶಿಕ್ಷಕಿ ರತ್ನ ಕುಮಾರಿ ಎಸ್. ಹಾಜರಿದ್ದರು.
ಸಹ ಶಿಕ್ಷಕಿ ಅಂಬಿಕಾ ನಿರೂಪಿಸಿದರು. ಸಹ ಶಿಕ್ಷಕ ದಿನೇಶ್ ನಾಯ್ಕ ವಂದಿಸಿದರು.

Leave a Reply

Your email address will not be published. Required fields are marked *

one × three =