ಬೈಂದೂರು: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯ ಹುಬ್ಬಳ್ಳಿ ಇದರ ವತಿಯಿಂದ ಹುಬ್ಬಳ್ಳಿಯಲ್ಲಿ ನಡೆದ 7 ನೇ ಘಟಿಕೋತ್ಸವ ಸಮಾರಂಭದಲ್ಲಿ ಎಸ್.ಡಿ.ಎಂ. ಕಾನೂನು ಕಾಲೇಜು ಮಂಗಳೂರಿನ ವಿದ್ಯಾರ್ಥಿನಿ ಮೊಮಿನ್ ಮುಫಿದಾ ಬೇಗಂ ನಾಗೂರು ಅವರಿಗೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಯವರಿಂದ ವ್ಯಾಪಾರ ಮತ್ತು ವಾಣಿಜ್ಯ ಕಾನೂನಿನಲ್ಲಿ ಎಲ್.ಎಲ್.ಎಂ. ಪದವಿಯಲ್ಲಿ ರಾಜ್ಯಕ್ಕೆ ದ್ವಿತೀಯ ರ್‍ಯಾಂಕ್ ಪ್ರಶಸ್ತಿ ಲಭಿಸಿದೆ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಪ್ರಶಸ್ತಿ ಪ್ರಧಾನ ಮಾಡಿದರು.
ಆಂಧ್ರಪ್ರದೇಶ ರಾಜ್ಯಪಾಲರಾದ ಮತ್ತು ಭಾರತದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್, ಕರ್ನಾಟಕ ರಾಜ್ಯ ಸರಕಾರದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸತ್ತಿಯ ವ್ಯವಹಾರಗಳು, ಕಾನೂನು ಮಂಡಳಿ ಹಾಗೂ ಪ್ರವಾಸೋದ್ಯಮ ಖಾತೆಯ ಸಚಿವರು,ವಿಶ್ವವಿದ್ಯಾಲಯದ ಪ್ರೋ.ಚಾನ್ಸಲರ್ ಡಾ. ಎಚ್.ಕೆ. ಪಾಟೀಲ್,ಕರ್ನಾಟಕ ರಾಜ್ಯ ಗಡಿ ಮತ್ತು ನದಿ ರಕ್ಷಣಾ ಆಯೋಗದ ಅಧ್ಯಕ್ಷ ಡಾ. ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಉಪಸ್ಥಿತರಿದ್ದರು.