ಬೈಂದೂರು; ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ,ಬೈಂದೂರು -ಶಿರೂರು ಘಟಕ,ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ,ಉಡುಪಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸಹಯೋಗದಲ್ಲಿ ಅಂಬೇಡ್ಕರ್ ಭವನ ಬೈಂದೂರಿನಲ್ಲಿ  ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಿತು..

ಜಿ.ಪಂ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಆರೋಗ್ಯ ಜಾಗ್ರತಿ ಸೇರಿದಂತೆ ಜನಸಾಮಾನ್ಯರಿಗೆ ಅವಶ್ಯಕವಾದ ಕಾರ್ಯಕ್ರಮಗಳಿಂದ ಸಧ್ರಡ ಸಮಾಜ ನಿರ್ಮಾಣ ಸಾಧ್ಯ.ಮೊಗವೀರ ಯುವ ಸಂಘಟನೆ ಅತ್ಯುತ್ತಮ ಕಾರ್ಯಕ್ರಮದ ಮೂಲಕ ಸಾಮಾಜಿಕ ಕೊಡುಗೆ ನೀಡುತ್ತಿದೆ ಎಂದರು.

ಮುಖ್ಯ ಅತಿಥಿಗಳಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮದನ್ ಕುಮಾರ್ ಎಸ್., ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷೆ ಶ್ಯಾಮಲಾ ಎಸ್. ಕುಂದರ್, ಕರ್ನಾಟಕ ರಾಜ್ಯ ಯೋಜನಾ ಆಯೋಗದ ಅಧಿಕಾರೇತರ ಸದಸ್ಯೆ ಪ್ರಿಯದರ್ಶಿನಿ ದೇವಾಡಿಗ, ಶ್ರೀ ಮಹಾಗಣಪತಿ ದೇವಸ್ಥಾನ ಅಳ್ವೆಗದ್ದೆಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಾಮ ಎನ್. ಮೊಗವೀರ ಅಳ್ವೆಗದ್ದೆ, ಉಪ್ಪುಂದ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಜಗನ್ನಾಥ ಮೊಗವೀರ  ಕರ್ಕಿಕಳಿ,ಬೈಂದೂರು ಘಟಕದ ಗೌರವ ಸಲಹೆಗಾರ ಎನ್. ಡಿ. ಚಂದನ್,ನಿತಿನ್ ಬಂಕೇಶ್ವರ,ಪ್ರಸಾದ್ ನೇತ್ರಾಲಯದ ಸಾರ್ವಜನಿಕ ಸಂಪರ್ಕಾಧಿಕಾರಿ ಮೋಹನ್ ಉಪಸ್ಥಿತರಿದ್ದರು.

ಬೈಂದೂರು -ಶಿರೂರು ಘಟಕದ ಅಧ್ಯಕ್ಷ ರವಿರಾಜ್ ಚಂದನ್ ಕಳವಾಡಿ ಅಧ್ಯಕ್ಷತೆ ವಹಿಸಿದ್ದರು.

ಮೊಗವೀರ ಯುವ ಸಂಘಟನೆಯ ಜಿಲ್ಲಾ ಸಂಘಟನೆಯ ಉಪಾಧ್ಯಕ್ಷ ಕೃಷ್ಣ ಬೈಂದೂರು ಸ್ವಾಗತಿಸಿದರು.ಬೈಂದೂರು ಘಟಕದ ಕಾರ್ಯದರ್ಶಿ ಗೌತಮ್ ತಗ್ಗರ್ಸೆ ಕಾರ್ಯಕ್ರಮ ನಿರ್ವಹಿಸಿದರು.ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಂಗಾಧರ ಮೊಗವೀರ ಪಡುವರಿ ವಂದಿಸಿದರು.ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ೩೫೦ಕ್ಕೂ ಅಽಕ ಕನ್ನಡಕಗಳನ್ನು ವಿತರಿಸಲಾಯಿತು.

News:Giri shiruru

pic: Rama byndoor

 

Leave a Reply

Your email address will not be published.

twelve − 10 =