ಬೈಂದೂರು: ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ನೂತನ ಕಛೇರಿ ಕಟ್ಟಡ, ಸಭಾಭವನ, ಸಂಜೀವಿನಿ ಕಛೇರಿ, ಗ್ರಾಮ ಆಡಳಿತ ಅಧಿಕಾರಿಯವರ ಕಛೇರಿ ಹಾಗೂ ಅರಿವು ಕೇಂದ್ರದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೂತನ ಗ್ರಾಮ ಪಂಚಾಯತ್ ಕಛೇರಿ ಉದ್ಘಾಟಿಸಿ ಮಾತನಾಡಿ ಗ್ರಾಮ ಪಂಚಾಯತ್‌ಗಳು ಸಹಕಾರದ ಮನೋಭಾವದ ಮೂಲಕ ಸಂವಿಧಾನದ ಆಶಯಗಳಿಗೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸಬೇಕು.ಸರಕಾರಿ ಕಛೇರಿಗಳು ಗ್ರಾಮಸ್ಥರಿಗೆ ಪರಿಹಾರ ನೀಡುವ ಕಟ್ಟಡಗಳಾಗಬೇಕು.ನಮ್ಮ ಊರು ಮಾದರಿ ಊರು ಆಗಬೇಕು.ಇಲ್ಲಿನ ವ್ಯವಸ್ಥೆಗಳು ಕೂಡ ಮಾದರಿಯಾಗಬೇಕು.ಜನಸೇವೆಯಲ್ಲಿ ಹೆಚ್ಚಿನ ಕಾಳಜಿ ತೋರಬೇಕು.ಗ್ರಾಮ ಪಂಚಾಯತ್‌ನೊಂದಿಗೆ ದಾನಿಗಳಾ ಸಹಕಾರವಿದ್ದಾಗ ಉತ್ತಮ ಬೆಳವಣಿಗೆ ಸಾಧ್ಯ ಎನ್ನುವ ನೆಲೆಯಲ್ಲಿ ಎಲ್ಲರ ಸಹಕಾರದಲ್ಲಿ ಗ್ರಾಮ ಪಂಚಾಯತ್‌ನ ನೂತನ ಕಛೇರಿ ನಿರ್ಮಾಣಗೊಂಡಿದೆ ಎಂದರು.
ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ ಸ್ಥಳೀಯಾಡಳಿತದ ಮೂಲಕ ವಿಧಾನಪರಿಷತ್ತಿಗೆ ಆಯ್ಕೆಯಾದ ನಾನು ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಬಗ್ಗೆ ಈಗಾಗಲೇ ಹಲವು ಬಾರಿ ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದು, ಅವರ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.ಗ್ರಾಮ ಪಂಚಾಯತಿಗಳು ರಾಜ್ಯ ಸರ್ಕಾರಗಳ ಹಲವು ಯೋಜನೆಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡುತ್ತಿದೆ. ಸ್ವಚ್ಛ ಭಾರತ ಕಾರ್ಯರೂಪಕ್ಕೆ ತರುವ ಕೆಲಸದಲ್ಲಿ ಗ್ರಾ.ಪಂ.ಗಳ ಪಾತ್ರ ಹಿರಿದಾಗಿದ್ದು, ಇದು ಶೇ.100ರಷ್ಟುಯಶಸ್ವಿಯಾಗಬೇಕಾದರೆ ಗ್ರಾಮಸ್ಥರ ಸಹಕಾರ ಅತ್ಯಗತ್ಯವಾಗಿದೆ ಎಂದರು.
ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಖಾರ್ವಿ ಅಧ್ಯಕ್ಷತೆ ವಹಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು.
ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಮಾಜಿ ಶಾಸಕ ಬಿ.ಎಮ್. ಸುಕುಮಾರ್ ಶೆಟ್ಟಿ, ಕೊಲ್ಲೂರು ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ,ಬೈಂದೂರು ತಾ. ಪಂ ಮಾಜಿ ಅಧ್ಯಕ್ಷ ಮಹೇಂದ್ರ ಪೂಜಾರಿ,ಖಂಬದಕೋಣೆ ರೈ.ಸೇ.ಸ.ಸ.ನಿ ಉಪ್ಪುಂದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಜಿ.ಪಂ ಮಾಜಿ ಅಧ್ಯಕ್ಷ ಎಸ್ ರಾಜು ಪೂಜಾರಿ, ನೂರ್ ಜುಮ್ಮಾ ಮಸ್ಜಿದ್ ನಾಗೂರು ಅಧ್ಯಕ್ಷ ಎಮ್. ಎಸ್. ಫಾರೂಕ್ ಸಾಹೇಬ್, ಕಿರಿಮಂಜೇಶ್ವರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಅನ್ನಪೂರ್ಣ ಉಡುಪ, ಉದ್ಯಮಿ ಸುರೇಶ್ ಶೆಟ್ಟಿ, ಶೇಖರ್ ಪೂಜಾರಿ ನಾಗೂರು,ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ತಿಮ್ಮೇಶ್ ಬಿ.ಎನ್,ಕಿರಿಮಂಜೇಶ್ವರ ಅಗಸ್ತ್ಯೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಎನ್.ವಿ ಪ್ರಕಾಶ್ ಐತಾಳ್, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಶೀಲಾ, ಕಾರ್ಯದರ್ಶಿ ಮುಕ್ತ ಹಾಗೂ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.






ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರನ್ನು, ಗುತ್ತಿಗೆದಾರರನ್ನು, ಗ್ರಾ.ಪಂ ಅಧ್ಯಕ್ಷರನ್ನು ಹಾಗೂ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳನ್ನು ಸಮ್ಮಾನಿಸಲಾಯಿತು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಸ್ವಾಗತಿಸಿದರು. ಶಿಕ್ಷಕ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.