ಶಿರೂರು: ಬದಲಾಗುತ್ತಿರುವ ವ್ಯವಸ್ಥೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಬಹುಮುಖ್ಯವಾಗಿರತಕ್ಕಂತ ಪ್ರಾಮುಖ್ಯತೆಯಿದೆ.ಶೈಕ್ಷಣಿಕ ಸಂಸ್ಥೆಗಳು ಅಭಿವೃದ್ದಿಯಾಗಬೇಕಾದರೆ ಶಿಕ್ಷಕರು, ಪಾಲಕರು ಮತ್ತು ಶಿಕ್ಷಣಾಭಿಮಾನಿಗಳ ಸಹಕಾರ ಬಹಳ ಮುಖ್ಯವಾಗಿದೆ.ಪೈಪೋಟಿಯುತ ಸಮಾಜದಲ್ಲಿ ಸಂಸ್ಥೆಗಳನ್ನು ಉಳಿಸಿಕೊಳ್ಳಬೇಕಾದರೆ ವಿದ್ಯಾರ್ಥಿಗಳ ಪ್ರಗತಿಯ ಬಗ್ಗೆ ವಿಶೇಷ ಮುತುವರ್ಜಿವಹಿಸಬೇಕಾದಂತ ಜವಬ್ದಾರಿ ಶಿಕ್ಷಕರದ್ದಾಗಿರುತ್ತದೆ.ಹೀಗಾಗಿ ಶಿರೂರು ಫ್ರೌಢಶಾಲೆ ಮತ್ತು ಕಾಲೇಜಿನ ಅಭಿವೃದ್ದಿಗೆ ದಾನಿಗಳ ಪ್ರೋತ್ಸಾಹದ ಜೊತೆಗೆ ಶಿಕ್ಷಕರ ಪ್ರಯತ್ನವೂ ಹೆಚ್ಚಬೇಗಿದೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು ಅವರು ಸರಕಾರಿ ಪದವಿ ಪೂರ್ವ ಕಾಲೇಜು ಶಿರೂರು ಇದರ ನೂತನ ಗಣಕ ವಿಜ್ಞಾನ ಕೊಠಡಿ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಈ ಮಾತುಗಳನ್ನಾಡಿದರು.
ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಪೈ,ಎಸ್.ಡಿ.ಎಮ್.ಸಿ ಅಧ್ಯಕ್ಷ ತಾರಿಸುಲ್ಲಾ ಮಹಮ್ಮದ್ ಗೌಸ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಪತ್ರಕರ್ತ ಅರುಣ್ ಕುಮಾರ್ ಶಿರೂರು,ಗ್ರಾ.ಪಂ ಸದಸ್ಯರಾದ ರವೀಂದ್ರ ಶೆಟ್ಟಿ ಆರ್‍ಮಕ್ಕಿ,ಬಾಬು ಮೊಗೇರ್,ಭಾರತಿ,ಶೋಯಿಬ್ ಅರೆಹೊಳೆ,ಇಂಜಿನಿಯರ್ ಸೈಯದ್ ಜಾಫರ್,ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯ ರವೀಂದ್ರ ಶೆಟ್ಟಿ ಹೊನ್ಕೇರಿ,ರಾಶಿದಾ,ವೆಂಕಟೇಶ ಮೇಸ್ತ,ಸತೀಶ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.







ಈ ಸಂದರ್ಭದಲ್ಲಿ ಅತ್ಯುತ್ತಮ ರಾಜ್ಯ ಪ್ರಶಸ್ತಿ ಪುರಸ್ಕ್ರತರಾದ ಸಿ.ಎನ್.ಬಿಲ್ಲವ ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಾದ ರವೀಂದ್ರ ಶೆಟ್ಟಿ ಹೊಸ್ಮನೆ ಯವರನ್ನು ಹಾಗೂ ಕಾಲೇಜಿಗೆ ಕೊಡುಗೆ ನೀಡಿದ ದಾನಿಗಳನ್ನು ಸಮ್ಮಾನಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ದೇವೇಂದ್ರ ಮೊಗೇರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಉಪನ್ಯಾಸಕ ಮಂಜುನಾಥ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.ಉಪಪ್ರಾಂಶುಪಾಲೆ ಜಯಂತಿ ಶೆಟ್ಟಿ ವಂದಿಸಿದರು.
ವರದಿ/ಚಿತ್ರ: ಗಿರಿ ಶಿರೂರು