ಬೈಂದೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರಿನ ವತ್ತಿನೆಣೆ ಬಳಿ ಸಿಮೆಂಟ್ ತುಂಬಿದ ಲಾರಿಯೊಂದು ಪಲ್ಟಿಯಾಗಿ ಚಾಲಕ ಅಪಾಯದಿಂದ ಪಾರಾದ ಘಟನೆ ಗುರುವಾರ ಮದ್ಯಾಹ್ನ ನಡೆದಿದೆ.ಭಟ್ಕಳ ಕಡೆಯಿಂದ ಸಿಮೆಂಟ್ ತುಂಬಿಕೊಂಡು ಕುಂದಾಪುರ ಕಡೆಗೆ ಚಲಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.ಲಾರಿ ಪಲ್ಟಿಯಾದ ರಭಸಕ್ಕೆ ಲಾರಿಯ ಮುಂಭಾಗ ನಜ್ಜುನಜ್ಜಾಗಿದ್ದು ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Leave a Reply

Your email address will not be published. Required fields are marked *

sixteen − eight =