ಬೈಂದೂರು; ಕಳೆದ 83 ದಿನಗಳಿಂದ ಗ್ರಾಮೀಣ ಭಾಗಗಳನ್ನು ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಕೈಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ಆಡಳಿತದ ಎದುರು ಅನಿಧಿ೯ಷ್ಟಾವಧಿ ಧರಣಿ ನಡೆಸುತ್ತಿರುವ ರೈತರ ನಿಯೋಗ ಬೆಳಗಾಂ ಅಧಿವೇಶನಕ್ಕೆ ಬೇಟಿ ನೀಡಿದೆ.ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ರೈತ ಮುಖಂಡರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಬಳಿಕ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ವಿವಿಧ ಸಚಿವರು ಮತ್ತು ಅಧಿಕಾರಿಗಳನ್ನು ಬೇಟಿ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ ಬೈಂದೂರು ರೈತರ ಹೋರಾಟ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದು 83 ದಿನಗಳಿಂದ ಬೈಂದೂರು ತಾಲೂಕು ಆಡಳಿತ ಕಛೇರಿ ಪ್ರತಿಭಟನೆ ನಡೆಸುತ್ತಿದ್ದು ಹೋರಾಟದ ಪ್ರಯತ್ನದಿಂದ ಈಗಾಗಲೇ ನಡೆಯಬೇಕಿದ್ದ ಪಟ್ಟಣ ಪಂಚಾಯತ್ ಚುನಾವಣೆ ಮುಂದೂಡಿದ್ದು ಬೆಳಿಗಾಲದ ಅಧಿವೇಶನದಲ್ಲಿ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಈ ವಿಚಾರವನ್ನು ಪ್ರಸ್ತಾಪಿಸುವ ಮೂಲಕ ಸರಕಾರದ ಗಮನ ಸೆಳೆದು ಅವರಿಗೆ ಬೈಂದೂರು ರೈತ ಸಂಘದ ಪರವಾಗಿ ವಿಶೇಷ ವಂದನೆಗಳನ್ನು ಅರ್ಪಿಸುತ್ತೇವೆ.ಅತೀ ಶೀಘ್ರದಲ್ಲಿ ಬೈಂದೂರು ರೈತರ ಹೋರಾಟಕ್ಕೆ ನ್ಯಾಯ ಒದಗಿಸಿಕೊಡಬೇಕು ಧರಣಿಯ 100ನೇ ದಿನದ ಬ್ರಹತ್ ಪ್ರತಿಭಟನೆ ಮಾಡಲಿದ್ದು ರಾಜ್ಯದ ವಿವಿಧ ರೈತ ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬೈಂದೂರು ಭಾಗದ ರೈತ ಮುಖಂಡರು ಹಾಜರಿದ್ದರು.
