ಶಿರೂರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಪ್ಪನಬೈಲು ಶಿರೂರಿನಲ್ಲಿ ಕ್ಲಸ್ಟರ ಮಟ್ಟದ ಕಲಿಕಾ ಹಬ್ಬವನ್ನು ಆಚರಿಸಲಾಯಿತು. ಶಿರೂರು ಗ್ರಾ.ಪಂ ಅಧ್ಯಕ್ಷೆ ನಾಗರತ್ನ ಆಚಾರ್ಯ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಅಡಗಿರುವ ಸೃಜನಾತ್ಮಕ ಗುಣ ಮತ್ತು ಕಲೆಯನ್ನು ಹೊರಗೆಳೆಯಲು ಪೂರ್ವತಯಾರಿ ನಡೆಸುವ ಹಬ್ಬವೇ ಕಲಿಕಾ ಹಬ್ಬ ಮಕ್ಕಳಲ್ಲಿರುವ ವಿವಿಧ ಬಗೆಯ ಪ್ರತಿಭೆಯ ಸಾಮರ್ಥ್ಯವನ್ನು ಪ್ರಸ್ತುತಪಡಿಸಲು ಅವಕಾಶ ಮಾಡಿಕೊಡುತ್ತದೆ. ಜೊತೆಗೆ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಾಗುವಂತೆ ಮಾಡುತ್ತದೆ.ಕಲಿಕಾ ಹಬ್ಬ ಚಟುವಟಿಕೆ ಆಧಾರಿತವಾಗಿದೆ. ಇದರಿಂದ ಹೊಸ ಹೊಸ ಬಗೆಯ ಪಠ್ಯೇತರ ಚಟುವಟಿಕೆಯನ್ನು ಮಗು ಕಲಿಯಲು ಸಾಧ್ಯವಾಗುತ್ತದೆ ಜೊತೆಗೆ ಚಟುವಟಿಕೆ ಆಧಾರಿತ ಕಲೆಯನ್ನು ಮಕ್ಕಳಲ್ಲಿ ತುಂಬಿದರೆ ಜೀವನದಲ್ಲಿ ಸ್ವಾವಲಂಬಿಯಾಗಿ ಬದುಕಲು ಕಲಿಸಿಕೊಟ್ಟಾಂತಾಗುತ್ತದೆ ಎಂದರು.
ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷೆ ಶರ್ಫುನ್ನಿಸ ಅಧ್ಯಕ್ಷತೆ ವಹಿಸಿದ್ದರು.
ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಬಿ.ಆರ್.ಸಿ ಪ್ರದೀಪ ಶೆಟ್ಟಿ, ಮಂಜುನಾಥ ದೇವಾಡಿಗ, ಉದ್ಯಮಿ ರಘುರಾಮ ಕೆ.ಪೂಜಾರಿ, ಗ್ರಾ.ಪಂ ಪಂಚಾಯತ್ ಸದಸ್ಯರಾದ ಮುಕ್ರಿ ಮಹ್ಮದ್ ಅಲ್ತಾಫ್, ರಶೀದಾ,ಸ್ಥಳ ದಾನಿಗಳಾದ ವಿವೇಕ್ ಭಟ್,ಸಿ.ಆರ್.ಪಿ ಗಣೇಶ ಪೂಜಾರಿ, ಶಾಲಾ ಎಸ್,ಡಿ.ಎಮ್.ಸಿ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಜಟ್ಟಿಗೇಶ್ವರ ಮಹಿಳಾ ಮಂಡಳಿ ಅಧ್ಯಕ್ಷೆ ಕವಿತಾ ಸುಬ್ರಾಯ ನಾಯ್ಕ, ದಿನೇಶ್ ಪೂಜಾರಿ,ರೇಣುಕಾ, ರಾಜಶ್ರೀ ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಬಪ್ಪನಬೈಲು ಶಾಲಾ ಮುಖ್ಯ ಶಿಕ್ಷಕಿ ವಿನೋದಿನಿ ಕೆ.ಶೇರುಗಾರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹ ಶಿಕ್ಷಕಿ ಸುಜಾತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವೈಶಾಲಿ ವಂದಿಸಿದರು.