ಬೈಂದೂರು: ಇಂದು ಮಹಿಳೆಯರು ಎಷ್ಟು ಪ್ರಬಲರಾಗಿದ್ದಾರೆ ಎಂದರೆ ಜ್ಞಾನವಿಕಾಸ ಕಾರ್ಯಕ್ರಮದ ಮಹತ್ವ ಅಷ್ಟಿದೆ.ಈ ಸಮಾಜದಲ್ಲಿ ನೂರಾರು ವರ್ಷಗಳಿಂದ ಶೋಷಣೆಗೆ ಒಳಪಡುತ್ತಿದ್ದರೂ ಇದನ್ನು ಪ್ರಶ್ನಿಸುವ ಧೈರ್ಯ ನಮ್ಮ ಮಹಿಳೆಯರಿಗೆ ಇಲ್ಲದೇ ಇರುವುದು ದುರಂತ.ಇವತ್ತು ಸಾಕಷ್ಟು ಮಹಿಳಾ ಸಾಂತ್ವನ ಕೇಂದ್ರಗಳು ಮಹಿಳೆಯರ ಹಕ್ಕಿನ ಬಗ್ಗೆ ತಿಳುವಳಿಕೆ ನೀಡುತ್ತಿದ್ದು ಮಹಿಳೆಯರು ಇದರ ಸದುಪಯೋಗ ಪಡೆಯಬೇಕು. ಮಾತೃಶ್ರೀ ಡಾ ಹೇಮಾವತಿ ವಿ.ಹೆಗ್ಗಡೆಯವರ ಕನಸಿನ ಕೂಸು ಈ ಜ್ಞಾನವಿಕಾಸ ಸಂಘ. ಮನೆ ಒಳಗೆ ಇರುವ ಮಹಿಳೆಯರು ಇಂದು ಸಮಾಜದ ವ್ಯವಹಾರ ಜ್ಞಾನ ಹೊಂದಿದ್ದಾರೆ. ಇನ್ನು ಹೆಚ್ಚಿನ ರೀತಿಯಲ್ಲಿ ಜ್ಞಾನ ವಿಕಾಸ ಸಂಘಗಳು ಬೆಳೆಯಲಿ ಹಾಗೂ ಸ್ವ-ಸಹಾಯ ಸಂಘದ ಮೂಲಕ ಜ್ಞಾನ ಗಳಿಸಿದ್ದಾರೆ.ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯ ಪಾತ್ರ ಅಪಾರವಾಗಿದೆ ಎಂದು ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ಜಂಟಿ ಆಡಳಿತ ನಿರ್ದೇಶಕಿ ಅನುಪಮಾ ಎಸ್.ಶೆಟ್ಟಿ ಹೇಳಿದರು ಅವರು ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ (ರಿ.) ಬೈಂದೂರು ತಾಲೂಕು ಇದರ ವತಿಯಿಂದ ನಾಗೂರು ಒಡೆಯರಮಠ ಶ್ರೀ ಗೋಪಾಲಕೃಷ್ಣ ಕಲಾಮದಿರದಲ್ಲಿ ನಡೆದ ನಡೆಯಲಿದೆ.ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಉದ್ಘಾಟಿಸಿ ಈ ಮಾತುಗಳನ್ನಾಡಿದರು.
ಧ.ಗ್ರಾ.ಯೋಜನೆ ಬೈಂದೂರು ತಾಲೂಕು ಕೇಂದ್ರ ಸಮಿತಿ ಅಧ್ಯಕ್ಷ ವಾಸು ಮೇಸ್ತ ಶಿರೂರು ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಧ.ಗ್ರಾ.ಯೋಜನೆ ಕರಾವಳಿ ಪ್ರಾದೇಶಿಕ ವಿಭಾಗದ ನಿರ್ದೇಶಕ ಆನಂದ ಸುವರ್ಣ,ಬೈಂದೂರು ತಾಲೂಕು ಭಜನಾ ಪರಿಷತ್ ಗೌರವಾಧ್ಯಕ್ಷ ರಘುರಾಮ ಕೆ.ಪೂಜಾರಿ,ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ,ಕಿರಿಮಂಜೇಶ್ವರ ಗ್ರಾ.ಪಂ ಅಧ್ಯಕ್ಷ ಶೇಖರ ಖಾರ್ವಿ,ಬೈಂದೂರು ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಚೈತ್ರ ಪಿ.ಯಡ್ತರೆ, ಸಂಪನ್ಮೂಲ ವ್ಯಕ್ತಿ ರಾಷ್ಟ್ರೀಯ ತರಬೇತುದಾರೆ ಹಾಗೂ ಗಣಿತಶಾಸ್ತ್ರ ಉಪನ್ಯಾಸಕಿ ಡಾ.ಹರಿಣಾಕ್ಷಿ ಕರ್ಕೆರ್ ಉಪಸ್ಥಿತರಿದ್ದರು.




ಈ ಸಂದರ್ಭದಲ್ಲಿ ಅತ್ಯುತ್ತಮ ಜ್ಞಾನ ವಿಕಾಸ ಕೇಂದ್ರಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಧ.ಗ್ರಾ.ಯೋಜನಾಧಿಕಾರಿ ಸಂಜಯ ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಕಿರಿಮಂಜೇಶ್ವರ ವಲಯ ಮೇಲ್ವಿಚಾರಕ ಭರತ್ ಹಾಗೂ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸುರೇಖಾ ಪೂಜಾರಿ ವಂದಿಸಿದರು.
ವರದಿ/ಗಿರಿ ಶಿರೂರು