ಬೈಂದೂರು : ಸಹಕಾರಿ ಸಂಸ್ಥೆಗಳನ್ನು ಮುನ್ನೆಡೆಸುವಾಗ ಸವಾಲುಗಳು ಸಹಜ. ಸಹಕಾರಿ ಕ್ಷೇತ್ರದಲ್ಲಿ ಸಾಮಾಜಿಕ ಚಿಂತನೆ ಮೂಲಕ ಅಭಿವೃದ್ದಿ ಸಾಧ್ಯ. ಈ ನಿಟ್ಟಿನಲ್ಲಿ ಸಮಾನ ಮನಸ್ಕರು ಸೇರಿ ಸ್ಥಾಪಿಸಿದ ಈ ಸಂಸ್ಥೆ ಜನಸಾಮಾನ್ಯರ ಸಂಸ್ಥೆಯಾಗಿ ಹೆಸರುಗಳಿಸಿದೆ. ಸಮಾಜದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿ ಹಾಗೂ ಮಹಿಳಾ ಸಬಲೀಕರಣಕ್ಕೂ ಸಂಘ ಸಹಕಾರಿಯಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸಮಾಜಮುಖಿ ಚಿಂತನೆಯೊಂದಿಗೆ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಸಿಬ್ಬಂದಿಗಳ ಪ್ರಾಮಾಣಿಕ ಕಾರ್ಯದಕ್ಷತೆ ಮತ್ತು ಗುಣಮಟ್ಟದ ಸೇಮೆಂದ ಹಂತಹಂತವಾಗಿ ಸಂಸ್ಥೆಯ ಅಭಿವೃದ್ದಿಯಾಗಿದೆ.ಸಂಘದ ಅಧ್ಯಕ್ಷ ರಾಜು ಪೂಜಾರಿಯವರಿಗೆ ಸಹಕಾರಿ ಕ್ಷೇತ್ರದಲ್ಲಿರುವ ಅಪಾರ ಅನುಭವದ ಫಲವಾಗಿ ಸಂಘವು ಅತ್ಯಲ್ಪ ಅವಧಿಯಲ್ಲಿ ಆರು ಶಾಖೆಗಳನ್ನು ತೆರೆಯುವುದರ ಮೂಲಕ ರಾಜ್ಯದಲ್ಲಿಯೇ ಮಾದರಿ ಸೌಹಾರ್ದ ಸಹಕಾರಿ ಸಂಘವಾಗಿ ಗುರುತಿಸಿಕೊಳ್ಳುವಂತಾಗಿದೆ. ಈ ಸಂಘದ ಶಾಖೆಗಳು ಇನ್ನೂ ಹೆಚ್ಚಾಗಬೇಕು. ಮುಂದಿನ ಹತ್ತನೇ ಶಾಖೆಯನ್ನು ನಾನೇ ಸ್ವತಃ ಬಂದು ಉದ್ಘಾಟಿಸಲಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಹೇಳಿದರು ಅವರು ಮರವಂತೆಯಲ್ಲಿ ನೂತನವಾಗಿ ಉದ್ಘಾಟನೆಗೊಂಡ  ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮರವಂತೆ ಶಾಖೆಗೆ ಭಾನುವಾರ ಭೇಟಿ ನೀಡಿ ಈ ಮಾತುಗಳನ್ನಾಡಿದರು.

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರನ್ನು ಸನ್ಮಾನಿಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಮೊಳಹಳ್ಳಿ ಮಹೇಶ್ ಹೆಗ್ಡೆ, ಉದ್ಯಾವರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಯುರ್ವೇದಿಕ್ ಆಸ್ಪತ್ರೆಯ ಅಧೀಕ್ಷಕ ಡಾ. ನಾಗರಾಜ, ಸಂಘದ ಉಪಾಧ್ಯಕ್ಷ ವಿನಾಯಕ ರಾವ್,ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಟ್ಟಣ ರೈ,ಶಾಖಾ ವ್ಯವಸ್ಥಾಪಕ ಪ್ರಶಾಂತ ಬಿಲ್ಲವ, ಸಂಸ್ಥೆಯ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *

ten − 7 =